ಊರುಬೈಲು ಶಾಲೆಯಲ್ಲಿ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

0


ಊರುಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿವರೆಗೆ ಕಲಿಯಲು ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ನಡೆಯಿತು. ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಸೂರಜ್ ಹೊಸೂರು, ಆದಂ ಸಂಟ್ಯಾರ್, ಎಮ್. ಸಿ. ಅನಂತ, ಮೊಯಿದು ಕುಂಞಿ ಕೊಯಿನಾಡು ಇದ್ದರು.