ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ವಾರ್ಷಿಕ ಸಭೆ

0

ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ನ ವಾರ್ಷಿಕ ಸಭೆಯು ಜು. 25 ರಂದು ಸುಳ್ಯದ ಅಂಬಟೆಡ್ಕದಲ್ಲಿರುವ ಕನ್ನಡ ಭವನದಲ್ಲಿ ನಡೆಯಿತು.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಸುಳ್ಯ ವಲಯದ ಅಧ್ಯಕ್ಷ ಹರೀಶ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ದ ಕ., ಉಡುಪಿ ಜಿಲ್ಲಾಧ್ಯಕ್ಷ ಆನಂದ್ ಎನ್ ಬಂಟ್ವಾಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ದ ಕ., ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳ, ಉಪಾಧ್ಯಕ್ಷ ಲೋಕೇಶ್ ಬಿ ಎನ್., ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಸುಳ್ಯ ವಲಯದ ಸ್ಥಾಪಕ ಅಧ್ಯಕ್ಷ ಗೋಪಾಲ್ ಸುಳ್ಯ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ದ ಕ., ಉಡುಪಿ ಜಿಲ್ಲಾ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಕರುಣಾಕರ ಎಣ್ಣೆಮಜಲು, ಗೌರವಾಧ್ಯಕ್ಷ ಪರಮ್ ಸುಳ್ಯ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಅವಿನ್ ಬೆಟ್ಟಂಪಾಡಿ, ರತೀಶ್ ಬೆಳ್ಳಾರೆ, ದಿವಾಕರ ಮುಂಡಾಜೆ ಉಪಸ್ಥಿತರಿದ್ದರು.