ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಸಮಿತಿಯ ಉಪಾಧ್ಯಕ್ಷರಾಗಿ ಮಹಮ್ಮದ್ ಕುಂಞಿ ಗೂನಡ್ಕ ಆಯ್ಕೆ

0

ಸುಳ್ಯ, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ಕಡಬ ಹಾಗೂ ವಿಟ್ಲ ವಲಯಗಳನ್ನು ಒಳಗೊಂಡಿರುವ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್ ಸಮಿತಿಯ ಉಪಾಧ್ಯಕ್ಷರಾಗಿ ಮಹಮ್ಮದ್ ಕುಂಞಿ ಗೂನಡ್ಕರವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅವರು ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿಯ ಅಧ್ಯಕ್ಷರಾಗಿ, ಸುಳ್ಯ ಎಸ್.ಎಂ.ಎ.ಅಧ್ಯಕ್ಷರಾಗಿ ವಿವಿಧ ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.