ಸಂಪಾಜೆ: ಸುಳ್ಯ ತಾಲೂಕಿನ ಕುಂದುಕೊರತೆ ನಿವಾರಣೆಗೆ ಮಹಮ್ಮದ್ ಕುಂಞಿ ಗೂನಡ್ಕ ಅವರಿಂದ ಉಸ್ತುವಾರಿ ಸಚಿವರಿಗೆ ಮನವಿ

0

ಸುಳ್ಯ ತಾಲೂಕಿನ ಭೂಮಾಪನಾ ಇಲಾಖೆಯಲ್ಲಿ ಉಂಟಾಗಿರುವ ಸಮಸ್ಯೆಗಳು, ಬಡವರ ಕಡತಗಳನ್ನು ವಿಲೇವಾರಿ ಮಾಡದೆ ಸತಾಯಿಸುತ್ತಿರುವ ಬಗ್ಗೆ, ಸುಳ್ಯದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶದ ನೋಂದಣಿಯಲ್ಲಿ ಆಗಿರುವ ತಾಂತ್ರಿಕ ದೋಷಗಳು ಹಾಗೂ ಸಂಪಾಜೆ ಗ್ರಾಮದ ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆಯ ಪ್ರಮುಖ ಬೇಡಿಕೆಗಳಾದ 94 ಸಿ ಹಕ್ಕು ಪತ್ರ, ಪ್ಲಾಟಿಂಗ್ ಸಮಸ್ಯೆಯನ್ನು ಸರಿಪಡಿಸುವುದು, ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೇ ಮಾಡಿಸುವುದು, ಸಾರ್ವಜನಿಕ ಸ್ಮಶಾನದ ಕೊರತೆ ಸೇರಿದಂತೆ ಸುಳ್ಯ ತಾಲೂಕಿನ ಕುಂದುಕೊರತೆ ನಿವಾರಣೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಅವರು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ದ.ಕ.ಜಿಲ್ಲಾಧಿಕಾರಿಗಳಿಗೆ ಈ ವಿಚಾರಗಳ ಬಗ್ಗೆ ತುರ್ತು ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು. ಇದೇ ವೇಳೆ ಸಂಪಾಜೆ ಗ್ರಾಮಕ್ಕೆ ಭೇಟಿ ನೀಡುವಂತೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಮಹಮ್ಮದ್ ಕುಂಞ ಗೂನಡ್ಕರವರು ಆಹ್ವಾನಿಸಿದರೆಂದು ತಿಳಿದುಬಂದಿದೆ.