ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಅನಿಲ್ ಬಿ.ವಿ ಅವರಿಗೆ ಡಾಕ್ಟರೇಟ್ ಪದವಿ

0


ಕೆ.ವಿ.ಜಿ, ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅನಿಲ್ ಬಿ.ವಿ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರು “Fusion of Face – Voice Biometrics for Rough-Neuro-Fuzzy Models” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಣೆಗೊಂಡಿದೆ. ಇವರು ಅಡ್ವಕೇಟ್ ಶ್ರೀ ವೆಂಕಪ್ಪ ಗೌಡ ಬಾಬು ಬೆಟ್ಟು ಮತ್ತು ಶ್ರೀಮತಿ ಮೀನಾಕ್ಷಿ ದಂಪತಿಗಳ ಪುತ್ರ ಇವರು ಸುಮಾರು 23 ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರನ್ನು ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್‌ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯ.ಜೆ., ಪ್ರಾಂಶುಪಾಲ ಡಾ. ಸುರೇಶ್ ಪಿ. ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಅಭಿನಂದಿಸಿರುತ್ತಾರೆ.