ಬೆಳ್ಳಾರೆ ಕೆ.ಪಿ.ಎಸ್. ನಲ್ಲಿ ಜಿಲ್ಲಾ ಮಟ್ಟದ ಚದುರಂಗ ಪಂದ್ಯಾಟ

0

ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚದುರಂಗ ಪಂದ್ಯಾಟವು ಕೆಪಿಎಸ್ ಬೆಳ್ಳಾರೆಯಲ್ಲಿ ನಡೆಯಿತು. ಶಾಸಕರಾದ ಕು. ಭಾಗೀರಥಿ ಮುರುಳ್ಯರವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದರು.


ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಭುವನೇಶ್ ಪಂದ್ಯಾಟದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ .ಇ. ಶುಭನುಡಿಯನ್ನಾಡಿದರು. ವೇದಿಕೆಯಲ್ಲಿ ಎಸ್ ಡಿಎಂಸಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಕ್ಷೇತ್ರ ಸಮನ್ವಯಾಧಿಕಾರಿಯಾದ ಶೀತಲ್ ಯು.ಕೆ., ಪ್ರಾಂಶುಪಾಲರಾದ ವಿಶ್ವನಾಥ ಗೌಡ ಪಿ, ಉಪಪ್ರಾಂಶುಪಾಲರಾದ ಉಮಾಕುಮಾರಿ, ಕೆಪಿಎಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ, ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಲಿಲ್ಲಿ ಪಾಯಸ್ , ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್- 1 ಸಂಘದ ಅಧ್ಯಕ್ಷರಾದ ಗಣೇಶ್ ಪಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ, ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ ಗೌಡ, ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ಸುಜಯ ಉಪಸ್ಥಿತರಿದ್ದ ರು. ಸುಳ್ಯ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ಸೂಫಿ ಪೆರಾಜೆ ಯವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪಾವತಿ ಪಿ ವಂದಿಸಿದರು. ಸಹಶಿಕ್ಷಕರಾದ ರಾಮಚಂದ್ರ ಭಟ್ ಎಂ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲೆಯ 7 ತಾಲೂಕುಗಳಿಂದ ಒಟ್ಟು 140 ಚೆಸ್ ಸ್ಪರ್ಧಾಳುಗಳು ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ, ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷರಾದ ರೊ. ಬಿ.ಕೆ. ಶಶಿಧರ , ಎಸ್ ಡಿಎಂಸಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಸದಸ್ಯರುಗಳಾದ ಹರ್ಷ ಜೋಗಿಬೆಟ್ಟು, ವಸಂತ ಉಲ್ಲಾಸ್ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಎಸ್ ಡಿಎಂಸಿ ಸದಸ್ಯರು, ಶಿಕ್ಷಕವೃಂದ, ಸ್ವಯಂಸೇವಕರಾಗಿ ಸ್ಕೌಟ್ & ಗೈಡ್ಸ್ ಘಟಕ ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ನಿರ್ಣಾಯಕರಾಗಿ ಸಹಕರಿಸಿದರು.