ಗುತ್ತಿಗಾರು : ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ವಿಶೇಷಚೇತನರ ಭೇಟಿ

0

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಆ.04 ರಂದು ವಿಶೇಷಚೇತನರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷಾ ಅವರು ಗ್ರಂಥಾಲಯದ ಉಪಯೋಗ ಸೇರಿದಂತೆ ಇತರ ಮಾಹಿತಿಗಳನ್ನು ನೀಡಿ ಗ್ರಂಥಾಲಯ ಸದಸ್ಯತ್ವ ಸಹ ಮಾಡಿಸಿ ಅರಿವು ಮೂಡಿಸುವ ಕಾರ್ಯ ನಡೆಸಿದರು.


ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಪುನರ್ವಸತಿ ಕಾರ್ಯಕರ್ತರಾದ ಚಂದ್ರಶೇಖರ್, ಸಂಜೀವಿನಿ ವಲಯ ಮೇಲ್ವಿಚಾರಕ ಅವಿನಾಶ್, ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಕಾವೇರಿ ಸಹಕರಿಸಿದರು.