ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗತಿಕ ಸ್ತನ್ಯಪಾನ ಸಪ್ತಾಹದ ಮಾಹಿತಿ ಕಾರ್ಯಕ್ರಮ, ಕರಪತ್ರ ಬಿಡುಗಡೆ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ವತಿಯಿಂದ ಆ.05 ರಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಾಗತಿಕ ಸ್ತನ್ಯಪಾನ ಸಪ್ತಾಹ ದ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳರವರು ಸ್ತನ್ಯಪಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.


ಸಪ್ತಾಹದ ಮಾಹಿತಿಯ ಕರಪತ್ರ ಬಿಡುಗಡೆಗೊಳಿಸಲಾಯಿತು.


ರೋಟರಿ ಅಧ್ಯಕ್ಷರಾದ ರೋ.ಬಿ. ಕೆ. ಶಶಿಧರ್, ರೋ.ವಿನಯ್, ರೋ ವಿಶ್ವನಾಥ ,ರೊ.ಪ್ರಮೋದ್
ವೈಪಾಲ ಹಾಗೂ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಆರೋಗ್ಯ ಸಹಾಯಕಿಯರು ಆಶಾ ಕಾರ್ಯಕರ್ತರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದರು.