ಐವರ್ನಾಡು ಗ್ರಾಮ ಪಂಚಾಯತು ಚುನಾವಣೆ – ನಾಮಪತ್ರ ಸಲ್ಲಿಕೆ

0

ಐವರ್ನಾಡು ಗ್ರಾಮ ಪಂಚಾಯತು ಚುನಾವಣೆ ಇಂದು ನಡೆಯಲಿದ್ದು ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದರು.
ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಲೀಲಾವತಿ ಕುತ್ಯಾಡಿ ನಾಮಪತ್ರ ಸಲ್ಲಿಸಿದರು.


ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು ಪ್ರಸ್ತುತ ಅಧ್ಯಕ್ಷರಾಗಿರುವ ಬಾಲಕೃಷ್ಣ ಕೀಲಾಡಿ ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಸುಳ್ಯ ವಲಯಾರಣ್ಯಾಧಿಕಾರಿ ಗಿರೀಶ್ ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.