ಅಮರಮುಡ್ನೂರು ಗ್ರಾಮ ಪಂಚಾಯತ್ ಇದರ ಅಧ್ಯಕ್ಷ ಉಪಾಧ್ಯಕ್ಷ ರ ಆಯ್ಕೆ ಪ್ರಕ್ರಿಯೆ ಇಂದು ಬೆಳಗ್ಗೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುನಾವಣಾಧಿಕಾರಿ ಇಂಜಿನಿಯರ್ ಮಣಿಕಂಠ
ರವರು ನಡೆಸಿದರು.
ಮೀಸಲಾತಿಯಂತೆ
ಅಧ್ಯಕ್ಷ ಸ್ಥಾನಕ್ಕೆ ಪ.ಜಾತಿ ಮಹಿಳೆ ಬಿಜೆಪಿ ಬೆಂಬಲಿತ ಸದಸ್ಯೆ ಶ್ರೀಮತಿ ಜಾನಕಿ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮೀನಾಕ್ಷಿ ಚೂಂತಾರು ಹಾಗೂ ಉಪಾಧ್ಯಕ್ಷತೆಗೆ ಬಿಜೆಪಿ ಬೆಂಬಲಿತ ಸದಸ್ಯೆ ಭುವನೇಶ್ವರಿ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯೆ ಅಶೋಕ್ ಚೂಂತಾರು ರವರು ನಾಮಪತ್ರ ಸಲ್ಲಿಸಿದ್ದಾರೆ.
ಮಧ್ಯಾಹ್ನ ತನಕ ನಾಮಪತ್ರ ಹಿಂತೆಗೆಯುವುದಕ್ಕೆ ಕಾಲಾವಕಾಶ ಇರುವುದರಿಂದ ಮುಂದಿನ ಬೆಳವಣಿಗೆ ಬಗ್ಗೆ ಖಚಿತ ಮಾಹಿತಿ ಲಭಿಸಿಲ್ಲ. ಒಟ್ಟಾಗಿ ನಾಲ್ಕು ಮಂದಿ ನಾಮಪತ್ರ ಸಲ್ಲಿಸಿರುವುದರಿಂದ ಬಹುತೇಕ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಪಿ.ಡಿ.ಒ ದಯಾನಂದ ಪತ್ತುಕುಂಜ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.