ಐವರ್ನಾಡು ಗ್ರಾಮ ಪಂಚಾಯತು ಅಧ್ಯಕ್ಷರಾಗಿ ಲೀಲಾವತಿ ಕುತ್ಯಾಡಿ

0

ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೀಲಾಡಿ ಅವಿರೋಧ ಆಯ್ಕೆ

ಐವರ್ನಾಡು ಗ್ರಾಮ ಪಂಚಾಯತು ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ಆ.08 ರಂದು ನಡೆದಿದ್ದು ಅಧ್ಯಕ್ಷರಾಗಿ ಶ್ರೀಮತಿ ಲೀಲಾವತಿ ಕುತ್ಯಾಡಿ ಹಾಗೂ ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೀಲಾಡಿ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಶ್ರೀಮತಿ ಲೀಲಾವತಿ ಕುತ್ಯಾಡಿ ನಾಮಪತ್ರ ಸಲ್ಲಿಸಿದ್ದರು.


ಸದಸ್ಯೆ ಶ್ರೀಮತಿ ಶರ್ಮಿಳಾ ಚೀಮುಳ್ಳು ಸೂಚಕರಾಗಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಒಬ್ಬರೆ ನಾಮಪತ್ರ ಸಲ್ಲಿಸಿರುವುದರಿಂದ ಲೀಲಾವತಿ ಕುತ್ಯಾಡಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದ್ದು ಪ್ರಸ್ತುತ ಅಧ್ಯಕ್ಷರಾಗಿರುವ ಬಾಲಕೃಷ್ಣ ಕೀಲಾಡಿ ನಾಮಪತ್ರ ಸಲ್ಲಿಸಿದ್ದರು.
ಇವರಿಗೆ ಯೋಗೀಶ ಕಲ್ಲಗದ್ದೆ ಸೂಚಕರಾಗಿದ್ದರು.


ಉಪಾಧ್ಯಕ್ಷ ಸ್ಥಾನಕ್ಕೂ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಇವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿ ಸುಳ್ಯ ವಲಯಾರಣ್ಯಾಧಿಕಾರಿ ಗಿರೀಶ್ ಆರ್ .ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸಹಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.