ಪೆರುವಾಜೆ ಗ್ರಾಮ ಪಂಚಾಯತ್ ಚುನಾವಣೆ – ನಾಮಪತ್ರ ಸಲ್ಲಿಕೆ

0

ಪೆರುವಾಜೆ ಗ್ರಾಮ ಪಂಚಾಯತ್ ಚುನಾವಣೆ ಆ.09 ರಂದು ನಡೆಯಲಿದ್ದು ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಕ್ಷೇತ್ರದಿಂದ ಪ್ರಸ್ತುತ ಅಧ್ಯಕ್ಷರಾಗಿರುವ ಜಗನ್ನಾಥ ಪೂಜಾರಿ ಮುಕ್ಕೂರು ನಾಮಪತ್ರ ಸಲ್ಲಿಸಿದರು.


ಇವರಿಗೆ ಸದಸ್ಯ ಸಚಿನ್ ರಾಜ್ ಶೆಟ್ಟಿ ಸೂಚಕರಾಗಿದ್ದರು.
ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಶಹನಾಜ್ ಪಿ.ಅವರು ನಾಮಪತ್ರ ಸಲ್ಲಿಸಿದರು.


ಇವರಿಗೆ ಸದಸ್ಯೆ ಶ್ರೀಮತಿ ಗುಲಾಬಿ ಸೂಚಕರಾಗಿದ್ದರು.
ಪೆರುವಾಜೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮಚಂದ್ರ ಕೆ.ಚುನಾವಣಾಧಿಕಾರಿಯಾಗಿದ್ದಾರೆ.
ಪಂಚಾಯತ್ ಪಿ.ಡಿ.ಒ ಜಯಪ್ರಕಾಶ್ ಅಲೆಕ್ಕಾಡಿ ಸಹಕರಿಸಿದರು.