ಕೂತುಹಲ ಕೆರಳಿಸಿರುವ ದೇವಚಳ್ಳ ಪಂಚಾಯತ್ ಅಧ್ಯಕ್ಷರ ಆಯ್ಕೆ

0

ಅಧ್ಯಕ್ಷ ಉಪಾಧ್ಯಕ್ಷತೆಗೆ ತಲಾ ಒಬ್ಬೊಬ್ಬರಿಂದ ನಾಮಪತ್ರ ಸಲ್ಲಿಕೆ

ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ ಮತ್ತು ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಲಿದ್ದು, ಈಗಾಗಲೇ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದು‌ ನಾಮಪತ್ರ ಸಲ್ಲಿಕೆಯಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಸ್ವಾಭಿಮಾನ ವೇದಿಕೆಯಿಂದ ಸುಲೋಚನಾ ದೇವ ನಾಮಪತ್ರ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಸ್ವಾಭಿಮಾನ ವೇದಿಕೆಯಿಂದ ಲೀಲಾವತಿ ಸೇವಾಜೆಯವರು ನಾಮಪತ್ರ ಸಲ್ಲಿಸಿದ್ದಾರೆ. ಬೇರೆ ನಾಮಪತ್ರ ಸಲ್ಲಿಕೆಯಾಗದೇ ಇರುವ ಕಾರಣ ಅವಿರೋಧ ಆಯ್ಕೆಯಾಗುವ ಸಂಭವವಿದೆ.‌ ನಾಮಪತ್ರ ಪರಿಶೀಲನೆ, ಹಿಂಪಡೆಯುವುದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಆದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಈ ಬಾರಿ‌ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ‌ ನೇತೃತ್ವದಲ್ಲಿ ಇಂದು ಮುಂಜಾನೆಯಿಂದ ಮಾತುಕತೆ ನಡೆಯುತ್ತಿರುವುದಾಗಿ ತಿಳಿದು ಬಂದಿದೆ. ಮಾತುಕತೆ ಫಲಪ್ರದವಾದರೆ ಈಗಾಗಲೇ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಂದೂಡುವ ಸಾಧ್ಯತೆಯೂ ಇದೆ.