ಬಾಳಿಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಪಾವನ ಜೋಗಿಬೆಟ್ಟು, ಉಪಾಧ್ಯಕ್ಷ ಸ್ಥಾನಕ್ಕೆ ರಮೇಶ್ ರೈ ನಾಮಪತ್ರ ಸಲ್ಲಿಕೆ

0


ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಒಟ್ಟು 10 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರು 9 ಮಂದಿ, ಕಾಂಗ್ರೆಸ್ ಬೆಂಬಲಿತ ಸದಸ್ಯರು ಒಬ್ಬರು ಇದ್ದಾರೆ.


ಮೊದಲ ಎರಡೂವರೆ ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಪಂಗಡ ಸ್ಥಾನದಿಂದ ಆಯ್ಕೆಯಾಗಿರುವ ಸವಿತಾ ಚಾಕೋಟೆ ಅಧ್ಯಕ್ಷರಾಗಿಯೂ, ಹಿಂದುಳಿದ ವರ್ಗದ ಎ ಮಹಿಳಾ ಕ್ಷೇತ್ರದಿಂದ ಆಯ್ಕೆಯಾದ ಶ್ರೀಮತಿ ತ್ರಿವೇಣಿಯವರು ಉಪಾಧ್ಯಕ್ಷರಾಗಿದ್ದರು. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಎರಡು ಸ್ಥಾನಗಳಿಗೆ ಇಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಇಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.