ಉಬರಡ್ಕ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನಾ ಸಭೆ

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಳಿಕ ಅಭಿನಂದನಾ ಸಭೆ ನಡೆಯಿತು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ ಮಾತನಾಡಿ ಶುಭ ಹಾರೈಸಿದರು. ನೂತನ ಅಧ್ಯಕ್ಷೆ ಪೂರ್ಣಿಮಾ ಸೂಂತೋಡು, ಉಪಾಧ್ಯಕ್ಷೆ ಚಿತ್ರಕುಮಾರಿ, ನಿರ್ಗಮನ ಉಪಾಧ್ಯಕ್ಷ ಪ್ರಶಾಂತ್ ಪಾನತ್ತಿಲ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ಯಾಮ್ ಪಾನತ್ತಿಲ, , ಮಾಜಿ ಪಂಚಾಯತ್ ಅಧ್ಯಕ್ಷರಾದ ಸುರೇಶ್ ಅಮೈ, ಹರಿಪ್ರಸಾದ್ ಪಾನತ್ತಿಲ, ಭಾಸ್ಕರ ರಾವ್, ಶ್ರೀಮತಿ ಶಾರದಾ ಡಿ.ಶೆಟ್ಟಿ, ಅಪ್ಪಯ್ಯ ಸೂಂತೋಡು, ಗ್ರಾ.ಪಂ ಸದಸ್ಯರಾದ ಅನಿಲ್ ಬಳ್ಳಡ್ಕ, ಮಮತಾ ಕುದ್ಪಾಜೆ, ವಸಂತಿ, ಭವಾನಿ ಮೂರ್ಜೆ ಮೊದಲಾದವರು ಉಪಸ್ಥಿತರಿದ್ದರು. ಪಂಚಾಯತ್ ಪಿ.ಡಿ.ಒ ವಿದ್ಯಾಧರ್ ಕಾರ್ಯಕ್ರಮ ನಿರೂಪಿಸಿದರು.