ನಾರ್ಕೋಡು ಶಾಲೆಯಲ್ಲಿ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮ

0

ರೋಟರಿ ಕ್ಲಬ್ ಸುಳ್ಯ ಸಿಟಿ ಇನ್ನರ್ವಿಲ್ ಕ್ಲಬ್ ಸುಳ್ಯ ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆ ಇದರ ವತಿಯಿಂದ ನಾರ್ಕೋಡು ಪ್ರಾಥಮಿಕ ಶಾಲೆಯಲ್ಲಿ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ವೈದ್ಯರಾದ ಡಾ ಗೀತಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ವತಿಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಪೌಡರನ್ನ ವಿತರಿಸಲಾಯಿತು ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಅಧ್ಯಕ್ಷ ಗಿರೀಶ್ ನಾರ್ಕೋಡು ಹಾಗೂ ಕಾರ್ಯದರ್ಶಿ ಚೇತನ್, ಇನ್ನರ್ವಿಲ್ ಕ್ಲಬ್ ಅಧ್ಯಕ್ಷೆ ಸವಿತ ನಾರ್ಕೋಡು ಹಾಗೂ ಕಾರ್ಯದರ್ಶಿ ಚಿಂತನ ಸುಬ್ರಮಣ್ಯ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನಂದ ಇವರು ಉಪಸ್ಥಿತರಿದ್ದರು.