ಸೈಂಟ್ ಜೋಸೆಫ್ ಪ್ರೌಢ ಶಾಲಾ ಬಾಲಕರ ಬ್ಯಾಡ್ಮಿಂಟನ್ ತಂಡ ಜಿಲ್ಲಾಮಟ್ಟಕ್ಕೆ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾರದ ಪ್ರೌಢಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ

ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ಬಾಲಕರ ತಂಡದ ಮಹಮ್ಮದ್ ಪೈಜ್ 9 ನೆ, ಶ್ರೇಯಸ್ 10ನೇ, ಮಹಮ್ಮದ್ ಸೈಫ್ 10ನೇ ಮಹಮ್ಮದ್ ಮುದಾಸಿರ್ 10ನೇ, ಅಮೃತ್ 9 ನೇ ತರಗತಿ ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾ ಸಂಸ್ಥೆಯ ಸಂಚಾಲಕ ರೇ. ಫಾ ವಿಕ್ಟರ್ ಡಿ’ಸೋಜಾ ಹಾಗೂ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿದ್ದರು.