ಕಳಂಜ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದಲ್ಲಿ ಉದ್ಯೋಗಿಗಳಾಗಿ ನಿವೃತ್ತರಾದ ವೆಂಕಪ್ಪ ನಾಯ್ಕ ಕುರಿಯ, ತಿಮ್ಮಪ್ಪ ಗೌಡ, ಆನಂದ ಎಸ್ ರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆ. 15ರಂದು ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಸಭಾಧ್ಯಕ್ಷತೆ ವಹಿಸಿದ್ದರು.

ಅರಂತೋಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಕುತ್ತಮೊಟ್ಟೆ ಅತಿಥಿಯಾಗಿ ಭಾಗವಹಿಸಿದ್ದರು. ಮಾಜಿ ಎಂ.ಎಲ್.ಸಿ. ಅಣ್ಣಾ ವಿನಯಚಂದ್ರ ಅಭಿನಂದನಾ ಮಾತುಗಳನ್ನಾಡಿದರು. ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ನಿರ್ದೇಶಕ ಎನ್. ವಿಶ್ವನಾಥ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಉಮೇಶ್ ಪಿ, ಕುಸುಮಾಧರ ಮತ್ತು ಗೀತಾ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಸಂಘದ ನಿರ್ದೇಶಕ ಅಜಿತ್ ರಾವ್ ಕಿಲಂಗೋಡಿ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ವಂದಿಸಿದರು. ಸಿಬ್ಬಂದಿ ಶ್ರೀಮತಿ ಗೀತಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಪ್ರಾರ್ಥಸಿದರು.

ಸಹಕಾರಿ ವ್ಯವಸ್ಥೆ ಇಂದು ಪಟ್ಟಭದ್ರ ಹಿತಾಸಕ್ತಿಗಳ ಮುಷ್ಟಿಯಲ್ಲಿದೆ. ಇದಕ್ಕೆ ಕೆಂದ್ರ ಸಚಿವರಾದ ಅಮಿತ್ ಷಾ ಕಾನೂನಿನ ಚೌಕಟ್ಟಿನಲ್ಲಿ ಇತರ ಉದ್ಯಮಗಳನ್ನು ತೆರೆಯುವಂತೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಮೂಲಕ ಸಹಕಾರಿ ರಂಗ ಅಭಿವೃದ್ಧಿ ಹೊಂದಲಿದೆ. ಆಡಳಿತ ಮಂಡಳಿಯಿಂದ ಮಾತ್ರ ಸಂಘವನ್ನು ಯಶಸ್ವಿಯಾಗಿಸಲು ಸಾಧ್ಯವಿಲ್ಲ. ಸಿಬ್ಬಂದಿಗಳ ಸಹಕಾರದಿಂದ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ನಿವೃತ್ತರಾದ ಸಿಬ್ಬಂದಿಗಳನ್ನು ಅಭಿನಂದಿಸಲಾಗಿದೆ. ಮೂರು ಮಂದಿಯ ಜೀವನವು ಸುಖ ಶಾಂತಿ ನೆಮ್ಮದಿಯಿಂದ ಕೂಡಿರಲಿ – ಸಂತೋಷ್ ಕುತ್ತಮೊಟ್ಟೆ

ಸಿಬ್ಬಂದಿಗಳು ನಿಸ್ವಾರ್ಥ ಸೇವೆ ಸಲ್ಲಿಸಿದರೆ ಮಾತ್ರ ಇವತ್ತು ಸಹಕಾರಿ ಸಂಸ್ಥೆಗಳು ಬೆಳೆಯುವುದಕ್ಕೆ ಸಾಧ್ಯ. ಜಿನಸು ವಿಭಾಗ ಅಥವಾ ಬ್ಯಾಂಕಿಂಗ್ ವ್ಯವಹಾರಗಳೇ ಇರಬಹುದು. ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಶ್ರಮವಹಿಸಿದರೆ ಮಾತ್ರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಮಾದರಿ ಸಿಬ್ಬಂದಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸಿಬ್ಬಂದಿಗಳಿಗೆ ಶುಭ ಹಾರೈಸುತ್ತಾ, ಮುಂದೆಯೂ ನಿಮ್ಮ ಮಾರ್ಗದರ್ಶನ ಸಂಘಕ್ಕೆ ಇರಲಿ – ಎಂ. ಕೂಸಪ್ಪ ಗೌಡ