ಕುಕ್ಕುಜಡ್ಕ:ಚೊಕ್ಕಾಡಿ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಚೊಕ್ಕಾಡಿ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ
ದಿನಾಚರಣೆಯನ್ನು ಆ.15 ರಂದುಆಚರಿಸಲಾಯಿತು.

ಶಾಲಾ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ರವರು ಧ್ವಜಾರೋಹಣವನ್ನು ನೆರವೇರಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ಆನಂದ ಚಿಲ್ಪಾರು, ಸತ್ಯಪ್ರಸಾದ ಪಿಲಿಕಜೆ, ಚೊಕ್ಕಾಡಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಚೈತ್ರಾ ಯು. ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಪೋಷಕರು,
ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಸಂಧ್ಯಾಕುಮಾರಿ ಸ್ವಾಗತಿಸಿದರು.