ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

0

ಸ್ವಾತಂತ್ರ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಮಂಗಳೂರು, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು, ಯುವ ಘಟಕ, ಮಹಿಳಾ ಘಟಕ ಸಹಯೋಗದಲ್ಲಿ ಬಾವುಟಗುಡ್ಡೆಯಲ್ಲಿ ಸ್ವಾತಂತ್ರ ಹೋರಾಟಗಾರ, ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗ ಸ್ವಾತಂತ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮ ಆ. 15 ರಂದು ನಡೆಯಿತು.

ಶಾಸಕ ವೇದವ್ಯಾಸ ಕಾಮತ್ ಧ್ವಜಾರೋಹಣ ನೆರವೇರಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಪೂರ್ಣಿಮಾ, ವಿರೋಧ ಪಕ್ಷದ ನಾಯಕ ನವೀನ್ ಡಿಸೋಜಾ, ಮೂಡ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರು, ತುಳು ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು, ಮಂಗಳೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಗುರುದೇವ್, ಕಾರ್ಯದರ್ಶಿ ಬಾಲಕೃಷ್ಣ ಡಿ.ಬಿ.,ಮೋಹನ್ ಕಲ್ಮಂಜ ಸೇರಿದಂತೆ ಮಂಗಳೂರು ಒಕ್ಕಲಿಗ ಸೇವಾ ಸಂಘದ ನಿರ್ದೇಶಕರು ಹಾಗೂ ಸದಸ್ಯರು, ಒಕ್ಕಲಿಗ ಯುವ ಘಟಕದ ಹಾಗೂ ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ ಪುತ್ತಿಲ ವಂದಿಸಿದರು.