ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ- ಪ್ರಾಥಮಿಕ ವಿಭಾಗದಲ್ಲಿ ಸ್ವಾತಂತ್ರ್ಯೋತ್ಸವ

0

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಪ್ರಾಥಮಿಕ ವಿಭಾಗದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.

” ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು. ದೇಶಕ್ಕಾಗಿ ನಾನೇನು ಕೊಡುಗೆ ಕೊಡಬಲ್ಲೆ ಎಂಬ ಯೋಚನೆಯನ್ನು ವಿದ್ಯಾರ್ಥಿಗಳು ಇದೇ ಹಂತದಲ್ಲಿ ಬೆಳೆಸಿಕೊಳ್ಳಬೇಕು” ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ನೀಡಿದರು. ಶಾಲಾ ಮುಖ್ಯ ಗುರು ಮಾಯಿಲಪ್ಪ ಜಿ. ಸೇರಿರುವ ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಧ್ವಜಾರೋಹಣ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ, ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ದೇಶಪ್ರೇಮವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದ ಮೊದಲು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಶಿಕ್ಷಕರು ಮತ್ತು ಪೋಷಕರು ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಸ್ವಾತಂತ್ರ ಬರಲು ಕಾರಣಕರ್ತರಾದ ಎಲ್ಲಾ ಮಹನೀಯರನ್ನು ಸ್ಮರಿಸಿಕೊಂಡರು.