ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು ಪ್ರಕರಣ

0

ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಕುಟುಂಬಸ್ಥರು

ತಹಶೀಲ್ದಾರ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆ ಹಿಂಪಡೆ

ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು ಘಟನೆಗೆ ಸಂಬಂಧಿಸಿ ಪುತ್ತೂರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು,, ತಹಶೀಲ್ದಾರ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆ ಹಿಂಪಡೆದ ಘಟನೆ ವರದಿಯಾಗಿದೆ.

ಸುಳ್ಯ ಶಾಂತಿನಗರ ನಿವಾಸಿ 17 ವರ್ಷ ಪ್ರಾಯದ ಬಾಲಕ ಹೊಟ್ಟೆನೋವೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಹೆಚ್ಚಿನ ಏರುಪೇರುಗೊಂಡ ಕಾರಣ ರೋಗಿಯನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿಸಲಾಗಿತ್ತು.

ಮಂಗಳೂರು ತಲುಪುತ್ತಿದ್ದಂತೆ ಬಾಲಕ ಮೃತಪಟ್ಟಿರುವುದಾಗಿ ವೈದರು ತಿಳಿಸಿದ್ದು, ಬಾಲಕನ ಸಾವಿನ ಹಿಂದೆ ಪುತ್ತೂರು ಆಸ್ಪತ್ರೆಯ ವೈದ್ಯರ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಕುಟುಂಬದವರು ಸಂಶಯ ವ್ಯಕ್ತಪಡಿಸಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಇಂದು ಸಂಜೆ ಮಂಗಳೂರಿನಿಂದ ಮೃತ ದೇಹವನ್ನು ತಂದು ಪುತ್ತೂರು ಖಾಸಗಿ ಆಸ್ಪತ್ರೆ ಮುಂಭಾಗದಲ್ಲಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಬಳಿಕ ಪುತ್ತೂರು ತಹಶೀಲ್ದಾರ್ ಪ್ರತಿಭಟನಾ ಸ್ಥಳಕ್ಕೆ ಬಂದು ಮೃತರ ಸಂಬಂಧಿಕರಿಂದ ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಜಿತ್‌ಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆ. 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದರು. ಬಳಿಕ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದಾಗ ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಮನೆಯವರು ಕೊಂಡಿಯ್ದಿದ್ದರು.
ಅಲ್ಲಿ ಆ.13ರಂದು ಸಂಜೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಬಳಿಕ ಬಾಲಕನ ಸ್ಥಿತಿ ಗಂಭೀರವಾದಾಗ ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ಕೊಂಡೊಯ್ಯುವಂತೆ ಅಲ್ಲಿಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

ಆ.14ರಂದು ಬೆಳಿಗ್ಗೆ ಆತನನ್ನು ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆನ್ನಲಾಗಿದೆ.