ಚೆಂಬು ಗ್ರಾಮ ದಬ್ಬಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಚೆಂಬು ಗ್ರಾಮ ದಬ್ಬಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಭವಾನಿ ಕುಮಾರ್ ಕೊಪ್ಪ ಧ್ವಜಾರೋಹಣ ನೆರವೇರಿಸಿದರು.

ಶಾಲಾ ಉಸ್ತುವಾರಿ ಸದಸ್ಯರಾದ ಗಿರೀಶ ಹೊಸೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ರಮೇಶ ಹೊಸೂರು, ಪೋಷಕರು, ಊರಿನ ಗಣ್ಯರು ಉಪಸಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರನ್ನು ಮುಖ್ಯ ಶಿಕ್ಷಕಿ ಸುಜಾತ ಬಿ. ಸ್ವಾಗತಿಸಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸರಕಾರದಿಂದ ಉಚಿತವಾಗಿ ನೀಡಿದ ಸಮವಸ್ತ್ರವನ್ನು ವಿತರಿಸಲಾಯಿತು. ಭವಾನಿಕುಮಾರ ಕೊಪ್ಪ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ಗುಣಗಾನ ಮಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಜೀವನದ ಗುರಿಯನ್ನು ಮುಟ್ಟಬೇಕೆಂಬ ಕಿವಿ ಮಾತನ್ನು ಹೇಳಿದರು.
ಎಸ್ ಡಿ ಎಂ ಸಿ ಸದಸ್ಯರು, ಪೋಷಕ ವೃಂದದವರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸಹ ಶಿಕ್ಷಕಿ ಹೇಮಲತಾ ವಂದಿಸಿದರು.