ನಿಡುಬೆ ಸ.ಕಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.
ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಚಂದ್ರಕಲಾ ಇವರು ಧ್ವಜಾರೋಹಣವನ್ನು ನೆರವೇರಿಸಿದರು.
ಸಭಾ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ತಶ್ವಿನಿ ಬಿ.ವಿ ಇವರು ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಚಂದ್ರ ಮೋಹನ್, ಉಪಾಧ್ಯಕ್ಷರಾದ ಶ್ರೀಮತಿ ಸುಂದರಿ, ಶಾಲಾಭಿವದ್ಧಿ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಕಲಾ, ಪೋಷಕರು,ಮಕ್ಕಳು,ಶಾಲಾಭಿಮಾನಿಗಳಾದ ಸ್ವಾತಿಕ್ ಕುದುಂಗು,ಶ್ರೀಮತಿ ಮಿಥುನ ಅಶ್ವತ್ಥ್ ಜಬಳೆ,ಪ್ರಸಾದ್ ಸ್ಮಿತಾ ಜಬಳೆ,ಶ್ರೀಮತಿ ಸೌಮ್ಯ ಗಣೇಶ್ ಕೊಚ್ಚಿ,ಜೀವನ್ ಜಬಳೆ,ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ಸುನೀತ ನಿಡುಬೆ,ಅಕ್ಷರ ದಾಸೋಹ ಸಿಬ್ಬಂದಿ ಶ್ರೀಮತಿ ಪುಷ್ಪಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರಾಜೇಶ್ವರಿ,ಅಂಗನವಾಡಿ ಸಹಾಯಕಿ ,ಹಳೆ ವಿದ್ಯಾರ್ಥಿಗಳು,ಪೋಷಕರು,ಸಾರ್ವಜನಿಕರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಭಾಷಣ ಮಾಡಿದರು.ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು.ನಂತರ ಶ್ರೀಯುತ ಐತಪ್ಪ ಗೌಡರವರ ಸ್ಮರಣಾರ್ಥ ದತ್ತಿ ನಿಧಿಯನ್ನು ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸ್ವಾತಿಕ್ ಕುದುಂಗು ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ಶೈಕ್ಷಣಿಕ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಕೊಡುಗೆಯನ್ನು ನೀಡಿದರು.ಶಾಲಾಭಿಮಾನಿ ಗಳು ಸಿಹಿ ತಿಂಡಿ ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ತಶ್ವಿನಿ ಬಿ.ವಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಎಲ್ಲರಿಗೂ ವಂದಿಸಿದರು.