ಆ. 25: ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

0

ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಆ. 25ರಂದು ಶ್ರೀ ಮಹಿಷ ಮರ್ದಿನಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಶ್ರೀ ಮಹಿಷ ಮರ್ದಿನಿ ಸೇವಾ ಸಮಿತಿ, ಶ್ರೀ ಮಹಿಷ ಮರ್ದಿನಿ ಮಹಿಳಾ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವುದು.


ಬೆಳಿಗ್ಗೆ 9:00ಗೆ ಪ್ರಾರ್ಥನೆ, ಪೂಜಾ ಪ್ರಾರಂಭ, ಮಧ್ಯಾಹ್ನ 11:00 ಧಾರ್ಮಿಕ ಸಭೆ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿರುವುದು.


ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಅಧ್ಯಕ್ಷತೆ ವಹಿಸಲಿದ್ದಾರೆ. ವಿಟ್ಲ ಮಾತೃಶ್ರೀ ಮೃತ್ರೇಯಿಯ ಕು. ಸಿಂಚನ ಭಟ್ ಕಾನತ್ತೂರು ಧಾರ್ಮಿಕ ಉಪನ್ಯಾಸ ನೀಡಲಿರುವರು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿರುವುದು.