ಮಾಜಿ ಪ್ರಧಾನಿ ದೇವೇಗೌಡರ ಕುಕ್ಕೆ ಸುಬ್ರಹ್ಮಣ್ಯ ಭೇಟಿ ಮುಂದೂಡಿಕೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡುವ ಕಾರ್ಯಕ್ರಮ ಮುಂಡೂಡಿಕೆಯಾಗಿದೆ.

ಕಾರಣಾಂತರದಿಂದ ನಿಗದಿತ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ.
ಆ.17ರ ಮದ್ಯಾಹ್ನ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳಿ ವಾಸ್ತವ್ಯ ಹೂಡಿ, ಆ.18 ರ ಶ್ರೀ ದೇವರ ದರುಶನ ಮತ್ತು ಸೇವಾಧಿಗಳ ಬಳಿಕ ಬಿಳಿನೆಲೆಗೆ ತೆರಳಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವ ಕಾರ್ಯಕ್ರಮ ನಿಗದಿಯಾಗಿತ್ತು. ಇದಕ್ಕಾಗಿ ಹೆಲಿಪ್ಯಾಡ್ ನಿರ್ಮಾಣ ಇತ್ಯಾದಿಗಳು ಸಂಪೂರ್ಣಗೊಂಡಿತ್ತು. ಆದರೆ ಕಾರಣಾಂತರಗಳಿಂದ ನಿಗದಿತ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ ಎಂದು ತಿಳಿದು ಬಂದಿದೆ.