ಮರ್ಕಂಜ : ನೂತನ‌ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

0

ಮರ್ಕಂಜ ಗ್ರಾಮ ಪಂಚಾಯತ್ ನ ಮುಂದಿನ‌ ಎರಡೂವರೆ ವರ್ಷದ ಅವಧಿಗೆ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ‌ ನಡೆಯಿತು.‌

ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಶ್ರೀಮತಿ ಪವಿತ್ರ ಗುಂಡಿ, ಉಪಾಧ್ಯಕ್ಷರಾಗಿದ್ದ ಗೋವಿಂದ ಅಳವುಪಾರೆಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗೀತಾ ಹೊಸೋಳಿಕೆ ಮತ್ತು‌ ಉಪಾಧ್ಯಕ್ಷ ರಾಗಿ ಆಯ್ಕೆಯಾದ ಸಂಧ್ಯಾ ಸೇವಾಜೆ ಪಾರೆಮಜಲುರವರಿಗೆ ಅಧಿಕಾರ ಹಸ್ತಾಂತರಿಸಿದರು. ಈ‌ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ‌ ರವಿಚಂದ್ರ, ಸದಸ್ಯರುಗಳಾದ ಚಿತ್ತರಂಜನ್ ಕೋಡಿ, ರಮತಾ ಕುದ್ಕುಳಿ, ನಾಗವೇಣಿ ಶೆಟ್ಟಿಮಜಲು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.