ಬಾಳಿಲ ಗ್ರಾಂ.ಪಂ ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ

0

ಬಾಳಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆ.18 ರಂದು ನಡೆಯಿತು.
ಅಧ್ಯಕ್ಷರಾಗಿ ಶ್ರೀಮತಿ ಪಾವನ ಜೋಗಿಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ರಮೇಶ್ ರೈ ಅಗಲ್ಪಾಡಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷೆ ಶ್ರೀಮತಿ ತ್ರಿವೇಣಿ ಕೆ.ವಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಪಿಡಿಒ ಹೂವಪ್ಪ ಗೌಡ, ಕಾರ್ಯದರ್ಶಿ ಜಯಶೀಲ ರೈ, ಸಿಬ್ಬಂದಿ ವರ್ಗದವರು ಹಾಗು ಗ್ರಾಮಸ್ಥರು
ಉಪಸ್ಥಿತರಿದ್ದರು.