ಮಡಪ್ಪಾಡಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ

0

ಮಡಪ್ಪಾಡಿ ಗ್ರಾಮ ಪಂಚಾಯಿತಿಗೆ ಮುಂದಿನ ಎರಡೂವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಇಂದು ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಮಿತ್ರದೇವ ಮಡಪ್ಪಾಡಿಯವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಉಷಾಜಯರಾಮ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುಜಾತ ಹಾಡಿಕಲ್ಲುರವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಯರಾಮ‌ ಹಾಡಿಕಲ್ಲು, ಶರ್ಮಿಳಾ ಕಜೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಕೀರ್ತಿಪ್ರಸಾದ್, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪಿ.ಸಿ ಜಯರಾಮ ಹಾಗೂ ನಿರ್ದೇಶಕರು, ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಹಾಜರಿದ್ದರು.