ಬಳ್ಪ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷತೆಗೆ ಇಂದು ಚುನಾವಣೆ

0

ಅಧ್ಯಕ್ಷ ಸ್ಥಾನಕ್ಕೆ ಹರ್ಷಿತ್ ಕಾರ್ಜ, ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತಿ ಪಿ.ಡಿ. ನಾಮಪತ್ರ ಸಲ್ಲಿಕೆ: ಅವಿರೋಧ ಆಯ್ಕೆ ಸಂಭವ

ಬಳ್ಪ ಗ್ರಾ.ಪಂ.‌ನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಹರ್ಷಿತ್ ಕಾರ್ಜ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಪಾರ್ವತಿ ಪಿ.ಡಿ. ನಾಮಪತ್ರ ಸಲ್ಲಿಸಿದ್ದಾರೆ.


ಅಧ್ಯಕ್ಷತೆಗೆ ಸದಸ್ಯ ರಾಜೀವ‌ ಕಣ್ಕಲ್ ಸೂಚಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯೆ ಶ್ರೀಮತಿ ಕುಸುಮಾ ಎಸ್. ರೈ ಸೂಚಿಸಿದರು. ಎರಡು ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸೂಂತಾರು ಸೇರಿದಂತೆ ಪಂಚಾಯತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧು ಎ.ಜೆ. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಡಲಿದ್ದಾರೆ. ಪಂಚಾಯತ್ ಕಾರ್ಯದರ್ಶಿ ರಘು ಮತ್ತು ಸಿಬ್ಬಂದಿಗಳು ಸಹಕಾರ ನೀಡಿದರು.