














ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ದೊರೆತಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.

ಪಂಜ ಪ್ರಾಥಮಿಕ ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಪೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಸುಬ್ರಹ್ಮಣ್ಯ ಕುಳ, ಶ್ರೀಕೃಷ್ಣ ಭಟ್ ಪಟೋಳಿ , ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚನಿಯಪ್ಪ ಗೌಡ ಕುಳ್ಳಕೋಡಿ ಉಪಸ್ಥಿತರಿದ್ದರು.









