














ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು.
ನೆಲ್ಲೂರು ಕೆಮ್ರಾಜೆ ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಎನ್. ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಉಮೇಶ್ ಪ್ರಭು, ಚೇತನ್ ಅತ್ತಿಮರಡ್ಕ, ಚಂದ್ರ ದಾಸನಕಜೆ ಉಪಸ್ಥಿತರಿದ್ದರು.









