ಆಲೆಟ್ಟಿ ಸದಾಶಿವ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಆಚರಣೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ತಂಬಿಲ ಸೇವೆ ಮತ್ತು ‌ವಿಶೇಷ ಅಭಿಷೇಕ ವಾಗಿ ಪೂಜೆಯು ಇಂದು ಬೆಳಗ್ಗೆ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯರು ನಾಗದೇವರಿಗೆ ಕ್ಷೀರಾಭಿಷೇಕ, ಸೀಯಾಳಭಿಷೇಕವನ್ನು ಅರ್ಪಿಸಿ ಮಹಾ ಮಂಗಳಾರತಿಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರು, ವ್ಯವಸ್ಥಾಪನಾ ಸಮಿತಿ, ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಭಜನಾ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸ್ಥಳೀಯ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.