ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ : ದಿ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ 11 ನೇ ವರ್ಷದ ಪುಣ್ಯತಿಥಿ ಆಚರಣೆ

0


ಕೆವಿಜಿ : ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮ ಪತ್ನಿ ದಿ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಆ. ೨೨ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ.ಯವರು ಶ್ರೀಮತಿ. ದಿ. ಜಾನಕಿ ವೆಂಕಟ್ರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೌನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆ, ಶ್ರೀ. ಚಂದ್ರಶೇಖರ್ ಪೇರಾಲ್, ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಶ್ರೀಮತಿ ದಿ. ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.