ಸುಳ್ಯ ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗೀತ ಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ತಾಲೂಕು ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ಶಾಲೆಯ ಸ್ಕೌಟ್ಸ್ – ಗೈಡ್ಸ್ ಮತ್ತು ಕಬ್ಸ್ – ಬುಲ್ ಬುಲ್ ದಳಗಳ ವಿದ್ಯಾರ್ಥಿಗಳು ಭಾಗವಹಿಸಿ ಸ್ಕೌಟ್ಸ್ ಮತ್ತು ಬುಲ್ ಬುಲ್ ವಿಭಾಗದ ಮಕ್ಕಳು ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಹಾಗೂ ಗೈಡ್ಸ್ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಾಗೂ ಕಬ್ಸ್ ವಿಭಾಗದ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.