ಅಮರಮುಡ್ನೂರು ಪಂಚಾಯತ್ ನೂತನ ಅಧ್ಯಕ್ಷ -ಉಪಾಧ್ಯಕ್ಷ ರಿಗೆ ಅಧಿಕಾರ ಹಸ್ತಾಂತರ

0

ಅಮರಮುಡ್ನೂರು ಗ್ರಾಮ ಪಂಚಾಯತ್ ನ ಮುಂದಿನ ಎರಡುವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ಮತ್ತು ಉಪಾಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಯವರಿಗೆ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯ ಮೇಲ್ತೋಟ ಹಾಗೂ ಉಪಾಧ್ಯಕ್ಷೆ ಶ್ರೀಮತಿ ಶಶಿಕಲಾ ಕೇನಡ್ಕ ರವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಪಿ.ಡಿ.ಒ ದಯಾನಂದ ಪತ್ತುಕುಂಜ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.