ಬೆಳ್ಳಾರೆ: ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0


ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಬೆಳ್ಳಾರೆ
ಇದರ ಆಶ್ರಯದಲ್ಲಿ
ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 25ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ವೇ.ಮೂ. ಕಾಯಾರ ಶಾಂತಕುಮಾರರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಕಲಶ ಸ್ಥಾಪನೆ, ಪಾರಾಯಣ, ಕುಂಕುಮಾರ್ಚನೆ, ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ ನಡೆಯಿತು. ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ, ಪೂರ್ವಾಧ್ಯಕ್ಷ ಮಹಾಲಿಂಗ ಭಟ್ ಕುರುಂಬುಡೇಲು ಸೇರಿದಂತೆ ಸೊಸೈಟಿ ಸದಸ್ಯರು, ಶ್ರೀ ಸದಾಶಿವ ಶಿಶು ಮಂದಿರದ ಮಾತಾಜಿ ತೇಜೇಶ್ವರಿ ಮತ್ತು ಮಾತೃಮಂಡಳಿ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ಮಂಗಳಾರತಿ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.