ಸುಳ್ಯ ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

0

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಸುಳ್ಯ, ಸ. ಮಾ ಹಿ. ಪ್ರಾ. ಶಾಲೆ ಜಟ್ಟಿಪಳ್ಳ ಇಲ್ಲಿ ನಡೆಸಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ಶಾಲಾ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನವನ್ನು ಹಾಗೂ ಹಿರಿಯರ ವಿಭಾಗದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಿಜೇತರಿಗೆ ಶಾಲಾ ಸಂಚಾಲಕರಾದ ವಂದನೀಯ ಫಾದರ್ ವಿಕ್ಟರ್ ಡಿಸೋಜಾ , ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮಾ ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದರು.