ಗುತ್ತಿಗಾರು : ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

0

ದ. ಕ. ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಮತ್ತು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗುತ್ತಿಗಾರು ಇದರ ಜಂಟಿ ಆಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯು ಆ25ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣ ಮತ್ತು ಸಂವಹನ ಅಧಿಕಾರಿಯಾದ ಶ್ರೀಮತಿ ನಳಿನಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾರವರು ಕಾರ್ಯಕ್ರಮ ಕ್ಕೆ ಶುಭಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಲಿಜೋಜೋಸ್ ರವರು ಪ್ರಾಸ್ತಾವಿಕ ಮಾತುಗಳಾನ್ನಡಿದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶ್ರೀಮತಿ ರಮ್ಯ, ಶಾಲಾ ಸಂಚಾಲಕಿ ಸಿಸ್ಟರ್ ಪಾವನಾ, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳಾದ ರಾಜ್ ಕುಮಾರ್ ಪೂಂಬಾಡಿ, ಭರತ್ ಡಿ, ಮೊಹಮ್ಮದ್ ಹಸೈನರ್, ಹಿತಾ ಮೆದು, ಮೋಹಿನಿ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಪಿ. ಮತ್ತು ಕುಶಾಲಪ್ಪ ಟಿ.ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮೂಹ ಸಂಪನ್ಮೂಲ ಅಧಿಕಾರಿ ಮಹೇಶ್ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕಿಯಾದ ಸಿಸ್ಟರ್ ಟ್ರೀಸಾ ಜಾನ್ ರವರು ವಂದಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ವೀಕ್ಷಾ ವಿ.ಯಸ್ ಪ್ರಾರ್ಥಿಸಿದರು.

ಶಾಲಾ ಸಹಶಿಕ್ಷಕಿಯರಾದ ಶಾಂತಕುಮಾರಿ ಮತ್ತು ಶ್ರೀಮತಿ ತಾರಾವೇಣಿ ಕಾರ್ಯಕ್ರಮ ನಿರೂಪಿಸಿದರು. ಸಭಾಕಾರ್ಯಕ್ರಮದ ನಂತರ ವಿವಿಧ ಸ್ವರ್ಧೆಗಳು ಆಯಾಯ ವೇದಿಕೆಯಲ್ಲಿ ನಡೆಯಿತು. ವೈಯಕ್ತಿಕ ಬಹುಮಾನ ಹಾಗೂ ಸಮಗ್ರ ಪ್ರಶಸ್ತಿಯನ್ನು ವಿಜಯ ವೇದಿಕೆಯಲ್ಲಿ ವಿತರಿಸಲಾಯಿತು. ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಶಾಲಾ ವತಿಯಿಂದ ನೀಡಲಾಯಿತು.