ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ

0

ಸುಳ್ಯದ ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆ. 25ರಂದು ಓಣಂ ಆಚರಣೆ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷ ಕೆ.ವಿ.ಹೇಮನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಆಯುರ್ವೇದಿಕ್ ಕಾಲೇಜು ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಮೊದಲಾದವರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಓಣಂ ಪ್ರಯುಕ್ತ ವಿದ್ಯಾರ್ಥಿಗಳಿಂದ ಪೂಕಳಂ, ತಿರುವಾದಿರ, ಓಣಂ ಹಾಡುಗಳು ಪ್ರಸ್ತುತಗೊಂಡಿತು.‌ ಓಣಂ‌ ಸದ್ಯ ಕೂಡಾ ನಡೆಯಿತು.