ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಬೇತಿ ಆರಂಭಗೊಂಡಿದ್ದು, ಇದರ ಉದ್ಘಾಟನೆಯು ಆ. 26ರಂದು ಜ್ಞಾನದೀಪ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ತಳೂರು ಅಧ್ಯಕ್ಷತೆ ವಹಿಸಿದ್ದರು. ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಧಿಕಾರಿ, ಹವ್ಯಾಸಿ ಯಕ್ಷಗಾನ ಕಲಾವಿದ ಶ್ಯಾಂಪ್ರಸಾದ್ ಗುಂಡಿ ಯಕ್ಷಗಾನ ತರಬೇತಿಯನ್ನು ಉದ್ಘಾಟಿಸಿದರು.
ಜ್ಞಾನದೀಪ ವಿದ್ಯಾಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಕೆ.ಆರ್.ಶ್ರೀ ಕಟೀಲ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಇಂದಿರೇಶ್ ಗುಡ್ಡೆ, ಯಕ್ಷಗಾನ ನಾಟ್ಯಗುರುಗಳಾದ ಬಾಲಕೃಷ್ಣ ನಾಯರ್ ನೀರಬಿದಿರೆ, ಪತ್ರಕರ್ತ ದುರ್ಗಾಕುಮಾರ್ ನಾಯರ್ಕೆರೆ, ಯಕ್ಷಗಾನ ಹಿಮ್ಮೇಳ ಕಲಾವಿದ ಬಾಲಕೃಷ್ಣ ಬೊಮ್ಮಾರು ಅತಿಥಿಗಳಾಗಿ ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು ಸ್ವಾಗತಿಸಿದರು. ವಿದ್ಯಾರ್ಥಿನಿ ಸುಶ್ಮಿತಾ ಪ್ರಾರ್ಥಿಸಿದರು. ಶಿಕ್ಷಕಿ ಭಾರತಿ ಯಕ್ಷಗಾನ ತರಬೇತಿ ಗುರುಗಳನ್ನು ಪರಿಚಯಿಸಿದರು. ಶಿಕ್ಷಕಿ ವಿದ್ಯಾಸರಸ್ವತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಯಕ್ಷಗಾನ ನಾಟ್ಯ ಗುರು ಬಾಲಕೃಷ್ಣ ನಾಯರ್ ಇಲ್ಲಿ ಪ್ರತಿ ಶನಿವಾರ ತರಬೇತಿ ನಡೆಸಿಕೊಡಲಿದ್ದಾರೆ.