ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ವಿವಿಧ ಕ್ರೀಡೆಗಳ ಸ್ಪರ್ಧೆಯನ್ನು ಆಯೋಜಿಸುವುದರ ಮೂಲಕ ಆಚರಿಸಲಾಯಿತು.

ಕ್ರೀಡೆ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯಕ ಎಂದು ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ರವರು ಈ ಸಂದರ್ಭದಲ್ಲಿ ನುಡಿದರು.

ಶಾಲಾ ಕ್ರೀಡಾ ಘಟಕದ ನಾಯಕರಾದ ಶ್ರೇಯಸ್ ಪಿ.ಕೆ ಮತ್ತು ವರ್ಷಿತ ಕೆ ಎಸ್ ಶಾಲೆಯ ವಿವಿಧ ಉಪಘಟಕಗಳ ವಿದ್ಯಾರ್ಥಿಗಳಿಗೆ ಕಬಡ್ಡಿ , ತ್ರೋಬಾಲ್ ಮುಂತಾದ ಕ್ರೀಡೆಗಳನ್ನು ಆಯೋಜಿಸಿ ಮುಂದಾಳತ್ವವನ್ನು ವಹಿಸಿಕೊಂಡರು.

ಶ್ರೇಯಸ್ ಪಿ ಕೆ ವಿದ್ಯಾರ್ಥಿಗಳಿಗೆ ಕ್ರೀಡಾ ನಿಯಮದಂತೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ವಿದ್ಯಾರ್ಥಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.