ಎಣ್ಮೂರು ಸ.ಹಿ.ಪ್ರಾ. ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಎಣ್ಮೂರು ಸ. ಹಿ.ಪ್ರಾ.ಶಾಲೆಯಲ್ಲಿ ಆ. 31ರಂದು ನಡೆಯಿತು.
ಮುಖ್ಯೋಪಾಧ್ಯಾಯರಾದ ಶ್ರೀಮತಿ ಭುವನೇಶ್ವರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಶರೀಫ್ ಬಹುಮಾನ ವಿತರಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಸುರೇಖಾ, ಶ್ರೀಮತಿ ಶಾಂತಮ್ಮ, ಕು. ಗುಲಾಬಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಸುನೀತಾ, ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ, ಸುದ್ದಿ ಪ್ರತಿನಿಧಿ ಸಂಕಪ್ಪ ಸಾಲ್ಯಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.