ಕೆ.ವಿ.ಜಿ. ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಕೆ.ವಿ.ಜಿ. ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಸೆ. 1ರಂದು ನಡೆಯಿತು.


ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಕನ್ನಡ ವಿಭಾಗದ ಮುಖ್ಯಸ್ಥೆ ಭವ್ಯ ಅಟ್ಲೂರು, ಹಿಂದಿ ವಿಭಾಗದ ಮುಖ್ಯಸ್ಥೆ ಲಲಿತಾ ಭಟ್, ಶಿಕ್ಷಕಿಯರಾದ ಬಬಿತಾ, ಭವ್ಯ ಕೆ, ಸೌಜನ್ಯ, ಮೆಲ್ವಿನ್ ಪಾಯಸ್ ಮತ್ತು ವಿದ್ಯಾರ್ಥಿಗಳು ಹಾಗೂ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ, ಸಿಬ್ಬಂದಿ ಕು. ಬೃಂದಾ ಪೂಜಾರಿ ಮುಕ್ಕೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 10ನೇ ತರಗತಿ ವಿದ್ಯಾರ್ಥಿನಿ ಕು. ಜನನಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. 9ನೇ ತರಗತಿ ವಿದ್ಯಾರ್ಥಿನಿ ಕು. ಧನ್ವಿ ವಂದಿಸಿದಳು. ವೇದಿಕೆಯಲ್ಲಿ ಉಪಸ್ಥಿತರಿದ್ದರು.