ಎನ್ನೆಂಸಿಯಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ತೆಂಗು ದಿನಾಚರಣೆ ಕಾರ್ಯಕ್ರಮ

0


ಕಲ್ಪವೃಕ್ಷ ತೆಂಗು ಕುರಿತು ಪ್ರಬಂಧ ರಚನೆ ಮತ್ತು ರಸಪ್ರಶ್ನೆ ಸ್ಪರ್ಧೆ


ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ತೆಂಗು ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 02 ಶನಿವಾರದಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಿತು. ಕಾಲೇಜಿನ ವಿಜ್ಞಾನ ವಿಭಾಗದ ಸಂಯೋಜಕರು ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಸತ್ಯಪ್ರಕಾಶ್ ಡಿ ತೆಂಗಿನ ಕಾಯಿ ಒಡೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ನಮ್ಮ ದೈನಂದಿನ ಬದುಕಿನಲ್ಲಿ ತೆಂಗು ಎಷ್ಟೊಂದು ಮಹತ್ವ ಪಡೆದಿದೆ ಎಂಬುದನ್ನು ಸವಿವರವಾಗಿ ತಿಳಿಸಿದರು.


ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ ಎಂ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭಾಂಶನೆಗೈದರು.
ನೇಚರ್ ಕ್ಲಬ್ ಸಂಯೋಜಕ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಐ.ಕ್ಯೂ.ಎ.ಸಿ ಸಂಯೋಜಕಿ ಡಾ.ಮಮತಾ ಕೆ ವಂದಿಸಿದರು. ನೇಚರ್ ಕ್ಲಬ್ ಕಾರ್ಯದರ್ಶಿ ಪವಿತ್ರಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ತೆಂಗು ದಿನಾಚರಣೆ ಪ್ರಯಕ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಕಲ್ಪವೃಕ್ಷ ತೆಂಗು ಕುರಿತು ಪ್ರಬಂಧ ರಚನೆ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಮುಂಭಾಗವನ್ನು ವಿದ್ಯಾರ್ಥಿಗಳು ತೆಂಗು ಮೂಲ ವಸ್ತುಗಳನ್ನೇ ಬಳಸಿ ಸಿಂಗರಿಸಿದ್ದರು.


ಕಾಲೇಜಿನ ಎಲ್ಲಾ ಉಪನ್ಯಾಸಕರು, ನೇಚರ್ ಕ್ಲಬ್ ಸದಸ್ಯರು ಮತ್ತು ಉಪನ್ಯಾಸಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.