ಸೆ. 6: ಬಾಳಿಲದ ಕೊಡೆಂಕಿರಿಯಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ

0

ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ಕೊಡೆಂಕಿರಿ, ಮರೆಂಗಾಲ ಇದರ ಆಶ್ರಯದಲ್ಲಿ 15ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಸೆ. 6ರಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಸಂಜೆ 6.00 ಗಂಟೆಗೆ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಮರೆಂಗಾಲರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ, ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ರಾತ್ರಿ 7.30ರಿಂದ ಲಹರಿ ಸಂಗೀತ ಕಲಾಕೇಂದ್ರ ಐಸಿಟಿ ನೆಲ್ಯಾಡಿ ಇವರಿಂದ ಭಕ್ತಿ ಸಂಗೀತ ರಸಮಂಜರಿ ನಡೆಯಲಿದೆ. ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ಮರೆಂಗಾಲ, ಕಾರ್ಯದರ್ಶಿಯಾಗಿ ರಾಜ್ ಕಿಶೋರ್ ಮತ್ತು ಕೋಶಾಧಿಕಾರಿಯಾಗಿ ನವೀನ್ ಎಂ. ಕಾರ್ಯನಿರ್ವಹಿಸುತ್ತಿದ್ದಾರೆ.