ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಸೆ. 4ರಂದು ಕೃಷ್ಣ ಲೀಲೋತ್ಸವ ಕಾರ್ಯಕ್ರಮ ನಡೆಯಿತು. ಸಂಸ್ಥೆಯ 20 ವಿದ್ಯಾರ್ಥಿಗಳು ಕೃಷ್ಣನ ಬಾಲ ಲೀಲೆಯನ್ನು ವೇದಿಕೆಯಲ್ಲಿ ಪ್ರದರ್ಶಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆ ಬಹುಮಾನ ವಿತರಿಸಿ “ಶ್ರಾವಣ ಮಾಸದಲ್ಲಿ ಬರುವ ಗೋಕುಲಾಷ್ಟಮಿ ಮಕ್ಕಳ ಬಾಲಲೀಲೆಗಳ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದೆ. ಪ್ರತಿಯೊಂದು ಮಗು ಅಮ್ಮನಿಗೆ ಕೃಷ್ಣನೇ. ಮಗುವಿನ ಆಟಾಟೋಪಗಳಲ್ಲಿ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು “ಎಂದು ಹೇಳಿದರು. ಕಾರ್ಯಕ್ರಮದ ಮೊದಲಿಗೆ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕ ದೇವಿಪ್ರಸಾದ ಜಿ. ಸಿ ವಂದಿಸಿದರು.