ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಜಯನಗರ ಕಾರ್ಯಕ್ಷೇತ್ರದ ಭಾಂದವ್ಯ ಜ್ಞಾನವಿಕಾಸ ಕೇಂದ್ರದ ಮಹಿಳಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ ಭಟ್ ಕೊಡಂಕೀರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 4 ಗೋಡೆಗಳ ಮಧ್ಯದಲ್ಲಿದ್ದ ಒಂದು ಮಹಿಳೆ ಹೊರಗಡೆ ಬಂದು ತಮ್ಮಲ್ಲಿರುವಂತಹ ಪ್ರತಿಭೆಯನ್ನು ಹೊರಹಾಕಲು ವೇದಿಕೆ ಕಲ್ಪಿಸಿ ಕೊಟ್ಟಂತಹ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳು ಶ್ಲಾಗನೀಯ ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಮಹಿಳೆಯರಲ್ಲಿ ಸ್ಪೂರ್ತಿ,ದೈರ್ಯ,ಆತ್ಮವಿಶ್ವಾಸ ತುಂಬುವ ಕೆಲಸ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಮುಂದುವರಿಯಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಹಿಳೆಯರಿಗೆ ಆಟೋಟ ಸ್ಪರ್ಧೆ,ಜನಪದ ಗೀತೆ ,ಜನಪದ ನೃತ್ಯ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಭಾದ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ತಾರ ರೈ ವಹಿಸಿದ್ದರು. ರೋಟರಿ ಕ್ಲಬ್ ಸದಸ್ಯರಾದ ಶ್ರೀಮತಿ ಮಹಾಲಕ್ಷ್ಮಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಭಾರತಿ, ಸೇವಾ ಪ್ರತಿನಿಧಿ ಶ್ರೀಮತಿ ವನಿತಾ,ಕೇಂದ್ರದ ಸಂಯೋಜಕಿ ಶ್ರೀಮತಿ ಅನುರಾಧಾ ಹಾಗೂ ಕೇಂದ್ರದ ಸದಸ್ಯರು ಸ್ವಸಹಾಯ ತಂಡದ ಸದಸ್ಯರು ಭಾಗವಹಿಸಿದ್ದರು.