Home ಇತ್ತೀಚಿನ ಸುದ್ದಿಗಳು ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

0

ಜಾಲ್ಸೂರು ಗ್ರಾಮದ ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.6ರಂದು ಜರುಗಿತು.

ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಗೌರಿಶಂಕರ್ ಹೊಸಗದ್ದೆ ಉದ್ಘಾಟಿಸಿ, ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕುಸುಮಾವತಿ, ಗ್ರಾ.ಪಂ. ಸದಸ್ಯರುಗಳಾದ ಶಿವಪ್ರಸಾದ್ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಜಾರುಗಂಬ ಸ್ಪರ್ಧೆ, ಪುರುಷರಿಗೆ ಲಕ್ಕಿಗೇಮ್, ಮೊಸರು ಕುಡಿಕೆ , ತೆಂಗಿನಕಾಯಿಗೆ ಕಲ್ಲು ಹೊಡೆಯುವುದು, ತೆಂಗಿನಕಾಯಿ ಕುಟ್ಟುವುದು, ಹಗ್ಗಜಗ್ಗಾಟ, ಮಹಿಳೆಯರಿಗೆ ಹಣತೆ ಹಚ್ಚುವುದು , ಮೊಸರು ಕುಡಿಕೆ, ಲಕ್ಕಿಗೇಮ್, ಹಗ್ಗಜಗ್ಗಾಟ ಜರುಗಿತು. ಮಧ್ಯಾಹ್ನ ಭೋಜನದ ಬಳಿಕ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

NO COMMENTS

error: Content is protected !!
Breaking