ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ 25ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಕಾರ್ಯಕ್ರಮ ಸೆ. 9 ಮತ್ತು 10ರಂದು ಬೆಳ್ಳಾರೆಯಲ್ಲಿ ನಡೆಯಲಿದೆ.
ಸೆ. 9ರಂದು ಅಪರಾಹ್ನ 2.00ರಿಂದ ಪಿರಮಿಡ್ ಮೊಸರು ಕುಡಿಕೆ ನಡೆಯಲಿದ್ದು, ಬೆಳ್ಳಾರೆ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿ ಉದ್ಯಮಿ ಮಿಥುನ್ ಶೆಣೈ ಉದ್ಘಾಟಿಸಲಿದ್ದಾರೆ. ಬಳಿಕ ವಿಶೇಷ ಆಕರ್ಷಣೆಯಾಗಿ ಸ್ನೇಹಾಂಜಲಿ ಕುಣಿತ ಭಜನಾ ತಂಡದ ಕುಣಿತ ಭಜನೆಯೊಂದಿಗೆ ಮೆರವಣಿಗೆ ನಡೆಯಲಿದೆ. ಸಂಜೆ 5.00ಗಂಟೆಗೆ ಬೆಳ್ಳಾರೆ ಅಚಲಾಪುರ ಕಟ್ಟೆಯ ಬಳಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ್ ಉಲ್ಲಾಸ್ ರವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ನಮಿತಾ ರೈ ಬಹುಮಾನ ವಿತರಿಸಲಿದ್ದಾರೆ.
ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವೀಣಾ, ಬೆಂಗಳೂರಿನ ಜಲದುರ್ಗಾ ಎಂಟರ್ಪ್ರೈಸಸ್ ಮಾಲಕರಾದ ನಿತ್ಯ ದುಗ್ಗಲಡ್ಕ, ಬೆಳ್ಳಾರೆ ಅಚಲಾಪುರ ಕಟ್ಟೆ ಸಮಿತಿ ಅಧ್ಯಕ್ಷ ಮಿಥುನ್ ಶೆಣೈ, ಬೆಳ್ಳಾರೆ ಜೆಸಿಐ ಅಧ್ಯಕ್ಷ ರವೀಂದ್ರನಾಥ ಶೆಟ್ಟಿ, ಬೆಳ್ಳಾರೆ ರೊಟರಿ ಕ್ಲಬ್ ಅಧ್ಯಕ್ಷ ಶಶಿಧರ್ ಬಿ.ಕೆ, ಬೆಳ್ಳಾರೆ ವಿರಾಟ್ ಫ್ರೆಂಡ್ಸ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಬೀಡು, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯೆ ಶ್ರೀಮತಿ ಗುಣವತಿ ಮಂಡೇಪು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೊಸರು ಕುಡಿಕೆ ವಿಜೇತರರಿಗೆ ಪ್ರಥಮ ಬಹುಮಾನವಾಗಿ ರೂ. 8020/-, ದ್ವಿತೀಯ ಬಹುಮಾನ ರೂ. 6020/- ಮತ್ತು ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರೋತ್ಸಾಹಕ ನಗದು ಬಹುಮಾನ ನೀಡಲಾಗುವುದು. ಸೆ. 10ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಪುರೋಹಿತ್ ಅಣ್ಣು ಭಟ್ ದೀಪ ಪ್ರಜ್ವಲಿಸಿ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಮಕ್ಕಳಿಗಾಗಿ ಮುದ್ದುಕೃಷ್ಣ ಸ್ಪರ್ಧೇ ನಡೆಯಲಿದೆ.
ಸಂಜೆ 6.00ಗಂಟೆಯಿಂದ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ ಉಲ್ಲಾಸ್ ಉಲ್ಲಾಸ್ ರ ಅಧ್ಯಕ್ಷತೆಯಲ್ಲಿ ಸಭಾ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶಾಸಕಿ ಕು. ಭಾಗೀರಥಿ ಮುರುಳ್ಯ, ಬೆಳ್ಳಾರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಿ.ಜಿ.ಎಸ್.ಎನ್. ಪ್ರಸಾದ್, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆ, ಎಸ್.ಬಿ.ಐ ಬೆಳ್ತಂಗಡಿ ಶಾಖಾ ಡೆಪ್ಯುಟಿ ಮ್ಯಾನೇಜರ್ ಮಹಾಬಲ ನಾಯ್ಕ್ ಪರ್ತಿಕೆರೆ, ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಾರ್ಯಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಬೆಳ್ಳಾರೆ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪೂರ್ವಾಧ್ಯಕ್ಷ ಪದ್ಮನಾಭ ಬೀಡು, ಸುಳ್ಯ ಯುವಜನ ಸಂಯುಕ್ತ ಮಂಡಳಿ ಪ್ರ.ಕಾರ್ಯದರ್ಶಿ ಸಂಜಯ್ ನೆಟ್ಟಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳ್ಳಾರೆ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಚೀಮುಳ್ಳು ಮತ್ತು ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಸುಜಾತ ಜನಾರ್ಧನ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರರಿಗೆ ಗುರುರತ್ನ ಪ್ರಶಸ್ತಿ, ಸಂಘಟನಾ ಕ್ಷೇತ್ರಕ್ಕಾಗಿ ಪ್ರದೀಪ್ ಕುಮಾರ್ ರೈ ಪನ್ನೆಯವರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧನೆಗಾಗಿ ಬಾಲಕೃಷ್ಣ ನೆಟ್ಟಾರುರವರಿಗೆ ಅಭಿನಂದನೆ ನಡೆಯಲಿದೆ. ರಾತ್ರಿ 8.00 ಗಂಟೆಯಿಂದ ಚಾಪರ್ಕ ಕಲಾವಿದರಿಂದ ಡಾ. ದೇವದಾಸ್ ಕಾಪಿಕಾಡ್ ರಚಿಸಿ, ನಿರ್ದೇಶಿಸಿ, ನಟಿಸಿರುವ ನಾಯಿದ ಬೀಲ ತುಳು ನಾಟಕ ನಡೆಯಲಿದೆ.